ನವದೆಹಲಿ (www.vknews.in) : ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯಾವುದೇ ಪಕ್ಷದ ನಾಯಕನಿಗೆ ವಿದೇಶದಲ್ಲಿ ಸ್ವಂತ ದೇಶವನ್ನು ಟೀಕಿಸುವುದು ಸೂಕ್ತವಲ್ಲ ಎಂದು ಅಮಿತ್ ಶಾ ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದನ್ನು ಮತ್ತು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ್ದನ್ನು ಉಲ್ಲೇಖಿಸಿ ಭಾರತವನ್ನು ದೂಷಿಸಲು ವಿದೇಶಕ್ಕೆ ಹೋಗುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.
ಯಾವುದೇ ದೇಶಭಕ್ತನು ಭಾರತದ ರಾಜಕೀಯವನ್ನು ಭಾರತದೊಳಗೆ ಚರ್ಚಿಸಬೇಕು. ಯಾವುದೇ ಪಕ್ಷದ ನಾಯಕ ವಿದೇಶಕ್ಕೆ ಹೋಗಿ ದೇಶದ ರಾಜಕೀಯದ ಬಗ್ಗೆ ಚರ್ಚಿಸುವುದು ಮತ್ತು ದೇಶವನ್ನು ಖಂಡಿಸುವುದು ಸೂಕ್ತವಲ್ಲ ಎಂದು ಅಮಿತ್ ಶಾ ಹೇಳಿದರು.
ಮೋದಿ ಸರ್ಕಾರದ ಒಂಬತ್ತನೇ ವಾರ್ಷಿಕೋತ್ಸವದ ಅಂಗವಾಗಿ ಗುಜರಾತ್ ನ ಪಟಾನ್ ಜಿಲ್ಲೆಯ ಸಿದ್ಧಪುರ ಪಟ್ಟಣದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ದೇಶವು ಪ್ರಮುಖ ಬದಲಾವಣೆಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.