ಕಾಪು (www.vknews.in) : ಇಂದು ಬೆಳಿಗ್ಗೆ ಕಟಪಾಡಿಯಲ್ಲಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಟಪಾಪಡಿ ಸಮೀಪದ ಸರಕಾರಿ ಗುಡ್ಡೆಯ ನಿವಾಸಿ, ಹೂವಿನ ವ್ಯಾಪಾರ ನಡೆಸುತ್ತಿದ್ದ ಇಕ್ಬಾಲ್(32) ಮೃತಪಟ್ಟವರು.
ಇವರು ತನ್ನ ಬೈಕಿನಲ್ಲಿ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸು, ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.