ಧಾರವಾಡ (www.vknews.in) : ಧಾರವಾಡದ ರಾಷ್ಟ್ರೀಯ ಹೆದ್ದಾರಿ 4 ರ ಹಳಿಯಾಳ ಸೇತುವೆ ಬಳಿ ಲಾರಿ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಿಂದುಗೌಡ (35), ಬಾಪುಗೌಡ (36) ಮೃತರು. ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿತ್ತು. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರು ಹಾಸನ ಮತ್ತು ಮೈಸೂರು ಮೂಲದವರು ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.