ಹೆಬ್ರಿ (www.vknews.in) : ಬಸ್ ಹಾಗೂ ಕಾರು ನಡುವಿನ ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಸೀತಾನದಿ ಜಕ್ಕನಮಕ್ಕಿ ಬಳಿ ನಡೆದಿದೆ. ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿದ್ದ ಶಿಕ್ಷಕರ ಕಾರು ಹಾಗು ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ನಡುವೆ ಅಪಘಾತ ನಡೆದಿದೆ. ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದ ಕಾರಣದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.