ಚಿತ್ರದುರ್ಗ (www.vknews.in) : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆ ನಿವಾಸಿಗಳಾದ ಜಾಕೀರ್ ಅಹಮ್ಮದ್ (60), ತಬಸೂಮ್ (28) ಹಾಗೂ ಮೂರು ತಿಂಗಳ ಹಯಾತ್ ಫಾತಿಮಾ ಮೃತಪಟ್ಟವರು. ಜೊತೆಗಿದ್ದ ನಯಾಜ್ (22), ಇಮ್ರಾನ್ ಖಾನ್ (32), ತಬ್ರೀಜ್ ಅಹಮ್ಮದ್ (27), ಸಬಾ (26) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಮೂವರು ಸ್ಥಳದಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.