(www.vknews.in) ; ಪಠ್ಯ ಚಟುವಟಿಕೆ ಮತ್ತು ಪಠ್ಯೇತರ ಚಟುವಟಿಕೆ ಜೀವನದ ಅತಿ ಮುಖ್ಯ ಸಂಗತಿಗಳು. ಆಸಕ್ತಿಯಿಂದ ಬೆಳಸಿಕೊಂಡರೆ ಭವಿಷ್ಯ ನಿರ್ಮಾಣ ಸಾಧ್ಯ ಎಂದು ಶ್ರೀ ಎಸ್.ಎನ್.ಚನ್ನಬಸಪ್ಪ ಶಾಸಕರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.
ಕರ್ನಾಟಕ ಸರಕಾರ , ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾಪೂಜಿನಗರ ಮತ್ತು ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಅಂತರ್ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು. ಕ್ರೀಡಾ ಮನೋಭಾವ ಎಲ್ಲರಲ್ಲಿಯೂ ಮುಖ್ಯ ಅದೇ ಭಾವದಿಂದ ಎಲ್ಲರೂ ಆಟವಾಡಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಚನ್ನಪ್ಪ.ಬಿ.ಜಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ವಿಧಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತಿಮುಖ್ಯ ಬೌದ್ಧಿಕ ಶಿಕ್ಷಣಕ್ಕೆ ಮಾತ್ರವಲ್ಲದೇ ಕ್ರೀಡೆ ಮತ್ತು ಪ್ರವಾಸೋದ್ಯಮಕ್ಕೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಶಿವಮೊಗ್ಗ ವಿಧಾನ ಪರಿಷತ್ ಸದಸ್ಯರಾದ ಶ್ರೀ.ಡಿ.ಎಸ್. ಅರುಣ್ ರವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ಸುರೇಖಾ ಮುರುಳೀಧರ್ ಮಾತನಾಡಿ, ಕ್ರೀಡಾ ಮನೋಭಾವ ಒಂದು ದಿನಕ್ಕೆ ಸೀಮಿತವಾಗದೇ ಜೀವನದ ಪ್ರತಿಕ್ಷಣದಲ್ಲೂ ಬೆಳಸಿಕೊಂಡರೆ ಯಶಸ್ವಿಯಾಗಲೂ ಸಾಧ್ಯ ಎಂದರು.
ಜಯಕೀರ್ತಿ .ಹೆಚ್.ಟಿ ಸ್ವಾಗತಿಸಿದರು. ಡಾ.ನಾಗೇಂದ್ರನಾಯ್ಕ.ಕೆ ವಂದಿಸಿದರು. ಡಾ.ರೇಷ್ಮ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು ಭಾಗವಹಿಸಿದ್ದರು. ನಂತರ ಕ್ರೀಡಾಪಟುಗಳಿಗೆ ಹ್ಯಾಂಡ್ ಬಾಲ್ ಪಂದ್ಯಾವಳಿಯನ್ನು ನಡೆಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.