ಶಿವಮೊಗ್ಗ(www.vknews.in) ; ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಜೂನ್ 15 ರಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ ಭವನ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ, ಬೆಂಗಳೂರು-29 ಇಲ್ಲ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ಗಳಲ್ಲಿ ಸ್ವೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹಾಗೂ ಇತರೆ ಕೆಲಸಗಾರರ ವಿಭಾಗಗಳಲ್ಲಿ ಕೆಲಸ ನಿರ್ವಹಿಸಲು ಉದ್ಯೋಗಾವಕಾಶವಿದೆ.
ಆಸಕ್ತರು, ನಿಗಮದ ಜಾಲತಾಣ ದಲ್ಲಿ ನೋಂದಾಯಿಸಿಕೊಂಡು ಅಥವಾ ಜೂನ್ 15 ರಂದು ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹೆಚ್.ಎಂ.ಸುರೇಶ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9019485688/ ದೂ.ಸಂ.: 08182-255294 ಗಳನ್ನು ಸಂಪರ್ಕಿಸುವುದು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.