(www.vknews.in) ; ಹನೂರು ಪಟ್ಟಣದ ಕೆ. ಎಸ್. ಆರ್. ಟಿ. ಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಶಾಸಕ ಎಂ. ಆರ್. ಮಂಜುನಾಥ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ಎಂ. ಆರ್. ಮಂಜುನಾಥ್ ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಶಕ್ತಿ ಯೋಜನೆ ಜಾರಿಗೆ ತಂದಿರುವುದು ಸಂತಸದ ವಿಚಾರ. ಶಕ್ತಿ ಯೋಜನೆ ಮಹಿಳೆಯರಿಗೆ ಬಹಳ ಉಪಯುಕ್ತ ಕಾರ್ಯಕ್ರಮವಾಗಿದೆ. ಈ ಯೋಜನೆ ನಿರಂತರವಾಗಿ ಇರಬೇಕು ಮತ್ತು ಮುಂದೆ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಈ ಯೋಜನೆ ಮುಂದುವರಿಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಸ್ ನಿಲ್ದಾಣದಲ್ಲಿ ಶುಚಿತ್ವ ಕಾಪಾಡಲು ಮುಂದಾಗಬೇಕು, ಅಗತ್ಯವಿರುವ ಕಡೆಗಳಲ್ಲಿ ಹೊಸ ಬಸ್ ರೂಟ್ ವ್ಯವಸ್ಥೆ ಮಾಡಿ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೆ ವೇಳೆ ಶೌಚಾಲಯ, ಬಸ್ ನಿಲ್ದಾಣದ ಆವರಣ ಸ್ಥಳ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಹನೂರು ಉಪ ತಹಸಿಲ್ದಾರ್ ಧನಂಜಯ್, ವಲಯದ ವ್ಯವಸ್ಥಾಪಕ ಸೂರ್ಯಕಾಂತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯರಾದ ಆನಂದ್, ಸಂಪತ್ ಕುಮಾರ್, ಮಹೇಶ್ ನಾಯಕ್ ಸೇರಿದಂತ ಮಹಿಳಾ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.