(www.vknews.in) : ಮಹಾರಾಷ್ಟ್ರದಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಪುಣೆ-ಮುಂಬೈ ಎಕ್ಸ್ಪ್ರೆಸ್ವೇಯಲ್ಲಿ ಈ ದುರ್ಘಟನೆ ನಡೆದಿದೆ. ಸೇತುವೆಯ ಮೇಲೆ ತೈಲ ಟ್ಯಾಂಕರ್ ಅಪಘಾತಕ್ಕೀಡಾಗಿದೆ. ಟ್ಯಾಂಕರ್ನಿಂದ ತೈಲ ಸೋರಿಕೆಯಾಗಿ ಸುತ್ತಲೂ ಬೆಂಕಿ ಕಾಣಿಸಿಕೊಂಡಿದೆ.
ವರದಿಗಳ ಪ್ರಕಾರ, ಅಪಘಾತದಲ್ಲಿ ಮಹಿಳೆ ಸೇರಿದಂತೆ ನಾಲ್ವರು ಸುಟ್ಟು ಹೋಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಯತ್ನ ಪ್ರಗತಿಯಲ್ಲಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.