ಉಡುಪಿ (ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲಾ ಸಂಚಾರಿ ನೇತ್ರ ಘಟಕ ಉಡುಪಿ ಜಿಲ್ಲೆ ಇವರ ವತಿಯಿಂದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ ಬಂಟಕಲ್ನಲ್ಲಿ ರವಿವಾರ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.ಸದರಿ ಶಿಬಿರದಲ್ಲಿ 193 ಮಂದಿಗೆ ಕಣ್ಣಿನ ತಪಾಸಣೆ ನಡೆಸಲಾಗಿದ್ದು, 69 ಮಂದಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಯಿತು.
ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಗೆ ಆಯ್ಕೆಯಾದ 9 ಮಂದಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.ಶಿಬಿರದಲ್ಲಿ ಜಿಲ್ಲಾ ಸಂಚಾರಿ ನೇತ್ರ ಘಟಕದ ನೇತ್ರತಜ್ಞ ಡಾ.ನಿತ್ಯಾನಂದ ನಾಯಕ್, ಆರ್.ಬಿ.ಎಸ್.ಕೆ ತಂಡದ ನೇತ್ರಸಹಾಯಕಿ ಸೌಮ್ಯ ಹಾಗೂ ಹರ್ಷ ಮತ್ತು ಇತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.