ನೋಯ್ಡಾ (www.vknews.in) ; ಫ್ಯಾಶನ್ ಶೋನಲ್ಲಿ ರ್ಯಾಂಪ್ ವಾಕ್ ಮಾಡುವ ವೇಳೆ ತಲೆ ಮೇಲೆ ಕಬ್ಬಿಣದ ಕಂಬ ಬಿದ್ದು ಯುವ ಮಾಡೆಲ್ ಒಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ವಂಶಿಕಾ ಚೋಪ್ರಾ (24) ಮೃತರು. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಭಾನುವಾರ ಮಧ್ಯಾಹ್ನ ಫಿಲ್ಮ್ ಸಿಟಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಅಪಘಾತದಲ್ಲಿ ಬಾಬಿ ರಾಜ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಬ್ಬಿಣದ ಪಿಲ್ಲರ್ ನಿರ್ಮಿಸಿದವರು ಸೇರಿದಂತೆ ಸಂಘಟಕರನ್ನೂ ವಿಚಾರಣೆಗೆ ಒಳಪಡಿಸಲಾಯಿತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.