ವಿಟ್ಲ (www.vknews.in) : ಪುಣಚದಲ್ಲಿ ಆಟೋ ರಿಕ್ಷಾಕ್ಕೆ ದನವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ತಪ್ಪಿದ ಆಟೋ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಜಗನ್ನಾಥ ಪೈಸಾರಿ (57) ಮೃತಪಟ್ಟವರು.
ಮಂಗಳವಾರ ಮಧ್ಯಾಹ್ನ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದೆ. ರಿಕ್ಷಾ ಪಲ್ಟಿಯಾಗಿ ಬಿದ್ದ ಕಾರಣ, ಅವರ ತಲೆಗೆ ಗಂಭೀರ ಗಾಯವಾಗಿದ್ದು,ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಜೀವ ಉಳಿಸಲು ಸಾಧ್ಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.