ಬೆಳಗಾವಿ (www.vknews.in) ; ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಿವಾಸಿ ಮಹಿಳೆಯೋರ್ವರು ಮನೆಯಲ್ಲಿ ಮೃತಪಟ್ಟಿದ್ದು, ಅವರ ಸೊಸೆ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಮಹಾಬೂಬಿ ಯಾಕೂಶಿ (53) ಮೃತಪಟ್ಟ ಮಹಿಳೆ. ಸೊಸೆ ಮೆಹರೂಣಿ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ದೂರು ದಾಖಲಿಸಲಾಗಿದೆ.
ಮೂರು ವರ್ಷಗಳ ಹಿಂದೆ ಯಾಕೂಶಿ ಪುತ್ರ ಸುಬಾನ್ ಮತ್ತು ಮೆಹರೂಣಿ ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷ ಸಂಸಾರ ಚೆನ್ನಾಗಿಯೇ ಇತ್ತು. ಬಳಿಕ ಗಂಡ ಸುಬಾನ್ಗೆ ಮೆಹರೂಣಿ ಬೇರೆ ಮನೆ ಮಾಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದುಬಂದಿದೆ.
ಬೇರೆ ಮನೆ ಮಾಡಲು ಗಂಡನ ಮನೆಯವರು ನಿರಾಕರಿಸಿದ್ದಕ್ಕೆ, ಸೊಸೆ ತನ್ನ ಕುಟುಂಬಸ್ಥರನ್ನು ಕರೆಸಿ ಅತ್ತೆ ಹಾಗೂ ಪತಿ ಮೇಲೆ ಹಲ್ಲೆ ಮಾಡಿಸಿದ್ದಾರೆ. ಹಲ್ಲೆಯಲ್ಲಿ ಗಾಯಗೊಂಡಿದ್ದ ಮಹಾಬೂಬಿಯವರನ್ನು ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಇದಾದ ಬಳಿಕ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಅತ್ತೆ ನಿನ್ನೆ ಮೃತಪಟ್ಟಿದ್ದಾರೆ. ಸಾವಿಗೆ ಲೋ ಬಿಪಿ ಅಥವಾ ಹೃದಯಾಘಾತ ಕಾರಣ ಎಂದು ಹೇಳಲಾಗುತ್ತಿದೆಯಾದರೂ, ಕೊಲೆಗೆ ಸೊಸೆ ಮತ್ತು ಕುಟುಂಬಸ್ಥರು ಕಾರಣ ಎಂಬ ಆರೋಪ ಕೇಳಿ ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.