ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಗಿಲನ್ ಎಂ.ಪಿ. ಅವರು ಜೂ.17ರ ಶನಿವಾರ ಬೆಳಿಗ್ಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2013ರ ಐಎಎಸ್ ಬ್ಯಾಚ್ ನ ಅಧಿಕಾರಿಯಾಗಿರುವ ಮುಲೈ ಮುಗಿಲನ್ ಅವರು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು. ಅದಕ್ಕೂ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.