ಕೊಡಗು(ವಿಶ್ವಕನ್ನಡಿಗ ನ್ಯೂಸ್): ಎಸ್ವೈಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಇಂದು (17-06-2022) ಮಡಿಕೇರಿ ಸಮೀಪದ ಮೇಕೇರಿಯಲ್ಲಿ ಜಿಲ್ಲಾ ಮತ್ತು ಝೋನ್ ಮಟ್ಟದ ನಾಯಕರಿಗೆ ತರಬೇತಿ ಶಿಬಿರ ನಡೆಸಲಾಯಿತು.
10:30 ಕ್ಕೆ ದರ್ಗಾ ಝಿಯಾರತ್ನೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಜಿಲ್ಲಾಧ್ಯಕ್ಷರದ ಅಬ್ದುಲ್ ಹಮೀದ್ ಮುಸ್ಲಿಯಾರ್,ಕೊಳಕೇರಿ ರವರು ಅಧ್ಯಕ್ಷತೆಯನ್ನು ವಹಿಸಿದ್ದರು.ಸಂಘಟನಾ ಕಾರ್ಯದರ್ಶಿ ಯಾಖೂಬ್ ಮಾಸ್ಟರ್ ಉದ್ಘಾಟನೆ ನಿರ್ವಹಿಸಿ ಮಾತನಾಡಿದರು.
ಕೂರ್ಗ್ ಜಂಇಯ್ಯತುಲ್ ಉಲಾಮಾದ ಪ್ರ.ಕಾರ್ಯದರ್ಶಿ ಅಶ್ರಫ್ ಅಹ್ಸನಿ,ಅನ್ವಾರಲ್ ಹುದಾರವರು ಮೊದಲ ಹಂತದ ತರಗತಿ ನಡೆಸಿ ಎಸ್ವೈಎಸ್ ಹಾಗೂ ಅದರ ನಾಯಕರ ಇತಿಹಾಸವನ್ನು ಮೆಲುಕು ಹಾಕುತ್ತಾ ನಾಯಕತ್ವ ಹೇಗಿರಬೇಕು ಎಂಬುದನ್ನು ಉದಾಹರಣೆ ಸಹಿತ ವಿವರಣೆ ನೀಡಿದರು.
ಎರಡನೇ ಹಂತದ ತರಗತಿಯಲ್ಲಿ ರಾಜ್ಯ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿಯವರು ತರಬೇತಿ ನೀಡಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನದ ಕುರಿತು ಗಮನಾರ್ಹ ತರಗತಿ ನಡೆಸಿದರು. ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ ಸ್ವಾಗತಿಸಿ ಕಾರ್ಯಕ್ರಮದ ಕೊನೆಯಲ್ಲಿ ಕೃತಜ್ಞತೆ ಸಲ್ಲಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.