ಉಳ್ಳಾಲ (www.vknews.in) : ತಲಪಾಡಿಯ ಕೆ.ಸಿ.ನಗರದಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 19 ವರ್ಷದ ಮುಹಮ್ಮದ್ ನುಮಾನ್ ಆತ್ಮಹತ್ಯೆಗೈದ ಯುವಕನಾಗಿದ್ದಾನೆ.
ಮನೆಯ ಒಳಗಡೆ ಕೊಠಡಿಯೊಳಗೆ ನುಮಾನ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯವರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನುಮಾನ್ ಉತ್ತಮ ಫುಟ್ಬಾಲ್ ಆಟಗಾರ, ಉತ್ತಮ ಗೋಲ್ ಕೀಪರ್ ಆಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.