(www.vknews.in) : ಮಹಾರಾಷ್ಟ್ರದ ನಾಗ್ಪುರ್ ಜಿಲ್ಲೆಯ ಫಾರೂಖ್ ನಗರದಲ್ಲಿ ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಮಕ್ಕಳು ಆಟವಾಡಲು ಹೋಗಿದ್ದರು ಬಳಿಕ ನಾಪತ್ತೆಯಾಗಿದ್ದರು. 24 ಗಂಟೆಯ ಬಳಿಕ ಮನೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ, ಹಳೆಯ ಕಾರಿನಲ್ಲಿ ಆಟವಾಡುತ್ತಿದ್ದಾಗ ಡೋರ್ ಲಾಕ್ ಆಗಿ ಉಸಿರುಗಟ್ಟಿ ಮಕ್ಕಳು ಮೃತಪಟ್ಟಿದ್ದಾರೆ. ಒಂದೇ ಮನೆಯ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಫಾರುಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4), ಆಲಿಯಾ ಫಿರೋಜ್ ಖಾನ್ (6) ಮತ್ತು ಅಫ್ರಿನ್ ಇರ್ಷಾದ್ ಖಾನ್ (6) ಮೃತಪಟ್ಟ ಮಕ್ಕಳು. ಫಾರೂಖ್ ನಗರದ ಪಂಚಪಾವಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.