ಬೆಂಗಳೂರು (www.vknews.in) : ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ವಿವಿಧ ಪ್ರಕರಣಗಳಲ್ಲಿ ಹತ್ಯೆಗೀಡಾದ ಸುಳ್ಯದ ಬೆಳ್ಳಾರೆಯ ಮಸೂದ್, ಸುರತ್ಕಲ್ ನ ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್, ದೀಪಕ್ ರಾವ್, ಮಂಡ್ಯದ ಇದ್ರೀಸ್ ಪಾಶಾ, ನರಗುಂದದ ಶಮೀರ್ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಬಿಜೆಪಿಯ ದ್ವೇಷ ಮತ್ತು ತಾರತಮ್ಯದ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ. ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಹಿಂದಿನ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಬಿಜೆಪಿ ಸರಕಾರ ಮಾಡಿದ ತಾರತಮ್ಯವನ್ನು ಸರಿ ಪಡಿಸಿದ್ದೇವೆ ಎಂದರು.
ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡ್ತೀವಿ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಅವರು ಇದೆ ಸಂದರ್ಭದಲ್ಲಿ ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.