ಮೂಡುಬಿದಿರೆ (www.vknews.in) : ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಡೆದಿದೆ. ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ ಸಾತ್ವಿಕ್(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್ ಕೂಡಾ ಹೆಚ್ಚಾಗಿ ಓದುವತ್ತ ಗಮನ ಹರಿಸುತ್ತಿದ್ದ ಆದರೆ ಎಕ್ಸಾಂನಲ್ಲಿ ಕಡಿಮೆ ಅಂಕ ಬಂದಿದ್ದು, ಈ ಬಗ್ಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.