(www.vknews.in) ; ಕಣಚೂರು ಪದವಿಪೂರ್ವ ಕಾಲೇಜು ಇದರ 2023 -24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ.ವೈ ಸಂಗಪ್ಪ ಪ್ರಾಧ್ಯಾಪಕರು ಭೌತಶಾಸ್ತ್ರ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಕುರಿತು ಮಾತನಾಡುತ್ತಾ “ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಮೇಲೆ ಕಲಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಒತ್ತಡಗಳಿವೆ ಆದರೆ ಇದನ್ನು ಹೆತ್ತವರು ಅರ್ಥೈಸಿಕೊಂಡು ಕರಗತ ಮಾಡಿಕೊಳ್ಳಬೇಕು. ಜೊತೆಗೆ ಯಶಸ್ಸು ತನ್ನನ್ನು ಹಿಂಬಾಲಿಸುವಂತೆ ಸಾಧನೆ ಮಾಡಬೇಕಾದರೆ, ವಿದ್ಯಾರ್ಥಿಗಳು ತಂದೆ ತಾಯಿ ಹಾಗೂ ಗುರುಗಳ ಹಿತವಚನವನ್ನು ಕೇಳಬೇಕು” ಎಂದರು .
ಕಾರ್ಯಕ್ರಮದ ಅಧ್ಯಕ್ಷರಾದ ಕಣಚೂರು ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಇದರ ಮುಖ್ಯಸ್ಥರಾದ ಡಾಕ್ಟರ್ ಹಾಜಿ ಯು ಕೆ ಮೂನುರವರು ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಾಹಿದಾರವರು ಕಾಲೇಜಿನ ಶಿಸ್ತು ಮತ್ತು ನಿಯಮಗಳ ಬಗ್ಗೆ ಹೆತ್ತವರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ವೇದಿಕೆಯಲ್ಲಿ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಇದರ ಪ್ರಾಂಶುಪಾಲರಾದ ಪ್ರೊಫೆಸರ್ ಇಕ್ಬಾಲ್ ಅಹಮದ್ ಯು ಟಿ, ಕಣಚೂರು ಪಿಯು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶಾಹಿದಾ, ಕಣಚೂರು ಪಬ್ಲಿಕ್ ಸ್ಕೂಲಿನ ಪ್ರಾಂಶುಪಾಲರಾದ ಕ್ಯಾರೆನ್ ಡಿಸೋಜಾ, ಕಣಚೂರು ಫ್ರೀ ಪ್ರೈಮರಿ ಸ್ಕೂಲಿನ ಪ್ರಾಂಶುಪಾಲರಾದ ಶ್ರೀಮತಿ ಲಿನೆಟ್ ಡಿಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಪ್ರಮಿತಾ ಅತಿಥಿಗಳನ್ನು ಸ್ವಾಗತಿಸಿ, ಕು ಅಶ್ವಿತಾ ಪರಿಚಯಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಕುಮಾರಿ ಶಿಭಾನಿ ವಂದಿಸಿ, ಉಪನ್ಯಾಸಕಿ ಚೇತನ ಕಾರ್ಯಕ್ರಮವನ್ನು ನಿರೂಪಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.