ಬೆಳ್ತಂಗಡಿ (www.vknews.in) : ಕೆಎಸ್ಸಾರ್ಟಿಸಿ ಬಸ್ಸಿಗೆ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ನಡೆದಿದೆ. ಓಡೀಲು ನಿವಾಸಿಯಾಗಿರುವ ದೀಕ್ಷಿತ್ ಮೃತ ಯುವಕ.
ಬುಧವಾರ ದೀಕ್ಷಿತ್ ನ ಹುಟ್ಟುಹಬ್ಬವಾಗಿದ್ದು, ಈ ಹಿನ್ನಲೆಯಲ್ಲಿ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.