ಉಳ್ಳಾಲ (www.vknews.in) : ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಪಾದಚಾರಿ ಮಹಿಳೆ ಬಸ್ ಅಪಘಾತದಿಂದ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಖಾಸಗಿ ಬಸ್ ಚಾಲಕನ ಚಾಣಾಕ್ಷತನದಿಂದ ಮಹಿಳೆ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ರಸ್ತೆಯಲ್ಲಿ ಬರುವ ವಾಹನಗಳನ್ನು ಗಮನಿಸದೆ ಮಹಿಳೆಯೋರ್ವರು ರಸ್ತೆ ದಾಟಿದ್ದು, ಈ ವೇಳೆ ಎದುರಿನಿಂದ ಬಸ್ ಬಂದಿದೆ. ಮಹಿಳೆ ರಸ್ತೆ ದಾಟುವುದನ್ನು ಗಮನಿಸಿದ ಬಸ್ ಡ್ರೈವರ್ ಬಸ್ ನ್ನು ಎಡಕ್ಕೆ ಸರಿಸಿ ಕೂದಲೆಳೆ ಅಂತರದಲ್ಲಿ ಮಹಿಳೆಯನ್ನು ರಕ್ಷಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.