ಉಡುಪಿ (www.vknews.in) : ಹೊಟ್ಟೆ ನೋವಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತಪಟ್ಟಿದ್ದಾರೆ. ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲು ನಿವಾಸಿ ನಿಕಿತಾ(20) ಮೃತ ವಿದ್ಯಾರ್ಥಿನಿ. ಜನಾರ್ದನ-ಶೋಭಾ ದಂಪತಿಯ ಏಕೈಕ ಮಗಳಾದ ನಿಕಿತಾಗೆ ಹೊಟ್ಟೆ ನೋವು ಎಂಬ ಕಾರಣಕ್ಕೆ ಕಳೆದ ಬುಧವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವೈದ್ಯರು ಮರುದಿನ ಸಿಟಿ ಸ್ಕ್ಯಾನ್ ಮಾಡಿದ್ದಾರೆ. ಮೂರನೆ ದಿನ ಎಂಡೋಸ್ಕೋಪಿ ಮಾಡುವುದಾಗಿ ಹೇಳಿದ್ದಾರೆ. ಆದರೆ ವೈದ್ಯರಿಗೆ ಅವಳಿಗೆ ಏನಾಗಿದೆ ಎಂದೇ ಗೊತ್ತಾಗಿಲ್ಲ. ಮತ್ತೆ ಅವರು ಅಫೆಂಡಿಕ್ಸ್ ಅಂತ ಆಫರೇಷನ್ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆದ ಬಳಿಕ ಲಂಗ್ಸ್ನಲ್ಲಿ ನೀರು ತುಂಬಿದ ಪರಿಣಾಮ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದು ಕಂಡು ಪೋಷಕರು ಆತಂಕಗೊಂಡಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.
ಯಾವುದೇ ಗಂಭೀರ ಸಮಸ್ಯೆ ಇಲ್ಲ ನಾವೇ ಚಿಕಿತ್ಸೆ ನೀಡುತ್ತೇವೆ ಎಂದು ವೈದ್ಯರು ಹೇಳಿದ್ದಾರೆ. ಇದ್ದಕ್ಕಿದ್ದಂತೆ ಶ್ವಾಸದಲ್ಲಿ ಏರುಪೇರು ಕಂಡು ಬಂದು ಭಾನುವಾರ ಮುಂಜಾನೆ ಯುವತಿ ಸಾವನ್ನಪ್ಪಿದ್ದಾರೆ. ಸಾವಿಗೆ ಹೃದಯಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.
ಮಣಿಪಾಲಗೆ ಶಿಫ್ಟ್ ಮಾಡಲು ಒಪ್ಪದ ಕಾರಣ ಸಾವು ಸಂಭವಿಸಿದೆ ಎಂದು ಪೋಷಕರು ಆರೋಪಿಸಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನಿಕಿತಾಗೆ ನ್ಯಾಯ ಒದಗಿಸಿಕೊಡುವಂತೆ ಒತ್ತಾಯ ಕೇಳಿ ಬರುತ್ತಿದೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.