ಬೆಂಗಳೂರು (www.vknews.in) : ನಗರದಲ್ಲಿ ಫುಡ್ ಡೆಲಿವರಿಗೆ ಬಂದಿದ್ದ ಯುವಕ ಲಿಫ್ಟ್ನಲ್ಲಿ ಒಬ್ಬಂಟಿಯಾಗಿ ಸಿಕ್ಕಿದ್ದ 10 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಪೋಷಕರ ದೂರಿನ ಮೇರೆಗೆ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಅಪಾರ್ಟ್ಮೆಂಟ್ಗೆ ಫುಡ್ ಡೆಲಿವರಿ ಮಾಡಲು ಹೋಗಿದ್ದ ಯುವಕನೊಬ್ಬ, ಲಿಫ್ಟ್ನಲ್ಲಿ ಹೋಗುವಾಗ ಬಾಲಕಿ ಒಬ್ಬಂಟಿಯಾಗಿ ಸಿಕ್ಕಿದ್ದಾಳೆ. 13ನೇ ಮಹಡಿಗೆ ಬಾಲಕಿ ಹೋಗುತ್ತಿದ್ದರಿಂದ ಲಿಫ್ಟ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪಾರ್ಟ್ಮೆಂಟ್ ಲಿಫ್ಟ್ ನಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಬಂಧನ ಮಾಡಲಾಗಿದೆ.
ಆರೋಪಿ ಫುಡ್ ಡೆಲಿವರಿ ಬಾಯ್ ಚೇತನ್ ಬಂಧನವಾಗಿದೆ. ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಘಟನೆ ನಡೆದಿತ್ತು. ಅಪಾರ್ಟ್ಮೆಂಟ್ ನ ಲಿಫ್ಟ್ 13 ನೇ ಮಹಡಿಗೆ ತೆರಳ್ತಿದ್ದ 10 ವರ್ಷದ ಬಾಲಕಿಗೆ ಲೈಂಕಿಕ ಕಿರುಕುಳ ನೀಡಿ ಅಲ್ಲಿಂದ ಪರಾರಿ ಆಗಿದ್ದನು. ಈ ಬಗ್ಗೆ ಬಾಲಕಿ ಪೋಷಕರು ಕೂಡಲೇ ಅಪಾರ್ಟ್ಟ್ಮೆಂಟ್ ಸೆಕ್ಯೂರಿಟಿ ಗಮನಕ್ಕೆ ತಂದಿದ್ದರು. ಆರೋಪಿ ಚೇತನ್ನನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಪೊಲೀಸರು ಬಂಧಿಸಿದ್ದಾರೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ದ ಪೋಕ್ಸೊ ಕಾಯ್ದೆ ಅಡಿ ಕೇಸ್ ದಾಖಲು ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.