ಬೆಂಗಳೂರು (www.vknews.in) : ಯಲಹಂಕ ಬಳಿಯ ನಾಗೇನಹಳ್ಳಿಯಲ್ಲಿ ಅಪಾರ್ಟ್ಮೆಂಟ್ನ 10ನೇ ಮಹಡಿಯಿಂದ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಲಕ್ನೋ ಮೂಲದ ಅಮೃತಾ ಶರ್ಮ (27) ಮೃತಪಟ್ಟ ಮಹಿಳೆ. ಗುರುವಾರ ರಾತ್ರಿ ಸುಮಾರು 10 ಗಂಟೆಗೆ ಈ ಘಟನೆ ನಡೆದಿದೆ. ಕೂಡಲೇ ಮಹಿಳೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಮಹಿಳೆಯ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು. ಇದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದೆ. ರಾತ್ರಿ ಎಲ್ಲರೂ ಮನೆಯಲ್ಲಿ ಇರುವಾಗ ಮಹಿಳೆ ಮಾತ್ರ ಅಡುಗೆ ಕೋಣೆಯ ಬಾಲ್ಕನಿಯಲ್ಲಿದ್ದರು. ಈ ವೇಳೆ ಘಟನೆ ನಡೆದಿದೆ. ಮೃತ ಮಹಿಳೆಗೆ ಎರಡು ವಷದ ಹಿಂದಷ್ಟೆ ಮದುವೆಯಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.