ಹಾಸನ (www.vknews.in) : ಚನ್ನರಾಯಪಟ್ಟಣದ ಬಿ.ಚೋಳೇನಹಳ್ಳಿಯಲ್ಲಿ ತೆಂಗಿನಕಾಯಿ ಗೊಂಚಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಪ್ರಜ್ವಲ್ (16) ಮೃತಪಟ್ಟ ಬಾಲಕ. ಗಾಳಿ, ಮಳೆಗೆ ಬಿದ್ದಿದ್ದ ತೆಂಗಿನ ಕಾಯಿಗಳನ್ನು ಒಂದೆಡೆ ಸಂಗ್ರಹಿಸುವಾಗ ಏಕಾಏಕಿ ಮರದಿಂದ ಕಾಯಿ ಗೊನೆ ಬಾಲಕನ ಮೇಲೆ ಬಿದ್ದಿದೆ. ತೀವ್ರವಾಗಿ ಪೆಟ್ಟಾಗಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾನೆ.
ಶ್ರವಣಬೆಳಗೊಳದವರಾದ ರವಿ ಮತ್ತು ಅನಸೂಯ ದಂಪತಿ ಮಗ ಪ್ರಜ್ವಲ್ನೊಂದಿಗೆ ಬಿ.ಚೋಳೇನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ವಾಸವಾಗಿದ್ದರು. ಪ್ರಜ್ವಲ್ ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.