ಬೆಂಗಳೂರು,(ವಿಶ್ವ ಕನ್ನಡಿಗ ನ್ಯೂಸ್): ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಖ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಹಿಂದಿನ ಸರ್ಕಾರದಲ್ಲಿ ಸುಮಾರು ವರ್ಷಗಳ ಕಾಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಎಲ್ ಕೆ ಅತೀಖ್ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತೆ ಯೋಜನೆಯ ಮೂಲಕ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದರು. ಜೊತೆಗೆ ಗ್ರಾಮೀಣ ಪ್ರದೇಶದ ಸ್ವರೂಪವನ್ನು ಸಹ ಬದಲಾಯಿಸಿ ರಾಜ್ಯ ಮತ್ತು ರಾಜ್ಯದ ಗಮನ ಸೆಳೆದಿದ್ದರು.
ಅವರಿಗೆ ಇತ್ತೀಚೆಗೆ ಹಣಕಾಸು ಇಲಾಖೆಯಲ್ಲಿ ಪ್ರಮುಖ ಹುದ್ದೆಯನ್ನು ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಇದೀಗ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿರುವ ಪ್ರಿಯಾಂಕ ಖರ್ಗೆ ಅವರು ಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಅಲ್ಪಾವಧಿಯಲ್ಲಿ ಇಲಾಖೆಯಲ್ಲಿ ಬದಲಾವಣೆ ಮಾಡಲು ಹೊರಟಿದ್ದು ಇದೀಗ ಐಎಎಸ್ ಅಧಿಕಾರಿ ಅಂಜುಮ್ ಪರ್ಮಿಸ್ ಅವರನ್ನು ಸರ್ಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ವರ್ಗಾಯಿಸಿದೆ.
ಐಎಎಸ್ ಅಧಿಕಾರಿ ಅಂಜುಂ ಪರ್ವೇಝ್ ಅವರು ಈಗಾಗಲೇ ಕೋಲಾರ ಜಿಲ್ಲೆಯ ಜಿಲ್ಲಾಧಿಕಾರಿ ಆಗಿಯೂ ಸೇವೆ ಸಲ್ಲಿಸಿದ್ದಾರೆ ಖಡಕ್ ಅಧಿಕಾರಿಯೆಂದು ಗುರುತಿಸಿಕೊಂಡಿರುವ ಅವರಿಗೆ ಪ್ರಮುಖ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.