ಚೆನ್ನೈ (www.vknews.in) : ಸೆಲ್ಫಿ ತೆಗೆಯುತ್ತಿದ್ದ ವೇಳೆ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೃತರನ್ನು ಈರೋಡ್ ಮೂಲದ ಪಾಂಡಿಯನ್ (22) ಮತ್ತು ವಿಜಯ್ (25) ಎಂದು ಗುರುತಿಸಲಾಗಿದೆ.
ತಮಿಳುನಾಡಿನ ತಿರುಪುರದಲ್ಲಿ ಈ ದುರ್ಘಟನೆ ನಡೆದಿದೆ. ತಿರುನಲ್ವೇಲಿ-ಬಿಲಾಸ್ಪುರ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಹಳಿಯ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ವೇಗವಾಗಿ ಬಂದ ರೈಲು ಇವರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ. ಪೊಲೀಸರ ಕ್ರಮದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.