ಕಾಸರಗೋಡು(ವಿಶ್ವಕನ್ನಡಿಗ ನ್ಯೂಸ್): ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ (ಜುಲೈ 6) ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ ಇಂಪಾಶೇಖರ್ ರಜೆ ಘೋಷಿಸಿದ್ದಾರೆ. ವೃತ್ತಿಪರ ಕಾಲೇಜುಗಳಿಗೂ ರಜೆ ಅನ್ವಯಿಸುತ್ತದೆ.
ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆಯ ಜೊತೆಗೆ ಹಲವು ಪ್ರದೇಶಗಳಲ್ಲಿ ಜಲಾವೃತ ಮತ್ತು ಭೂಕುಸಿತದಿಂದ ಸಂಚಾರ ಅಸ್ತವ್ಯಸ್ತವಾಗಿರುವ ವರದಿಗಳ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಪೂರ್ವ ನಿಗದಿತ ಪರೀಕ್ಷೆಗಳು ಮತ್ತು ಸಂದರ್ಶನಗಳು ಬದಲಾಗದೆ ಉಳಿಯುತ್ತವೆ. ರಜೆಯ ಕಾರಣ ಕಳೆದು ಕೊಂಡಿರುವ ವ್ಯಾಸಂಗ ಸಮಯವನ್ನು ಹೊಂದಾಣಿಕೆ ಮಾಡಿಕೊಳ್ಳಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.