ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾ ಪಂಚಾಯತ್ ನ ಸಂಪನ್ಮೂಲ ಕೇಂದ್ರದಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಕೈ ಮಗ್ಗ ತರಬೇತಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿ , ಮಹಿಳೆಯರೊಂದಿಗೆ ಸಂವಾದ ನಡೆಸಿದರು. ಹಾಗೂ ತರಬೇತಿ ಕೇಂದ್ರದ ಆವರಣದಲ್ಲಿ ಗಿಡ ನೆಟ್ಟರು. ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಎಸ್ಪಿ ಅಕ್ಷಯ್ ಎಂ ಹಾಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. -ಉಡುಪಿ ವಾರ್ತಾಭವನ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.