ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು , ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ . ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿತಿಂಗಳು ರೂ .2000 / -ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ದಿನಾಂಕ : 20.07.2023 ರಿಂದ ಕೋಲಾರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು , ಅರ್ಹಫಲಾನುಭವಿಗಳು ಈ ಕೆಳಕಂಡ ವಿವರಗಳಂತೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಅಕ್ರಮ್ ಪಾಷ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೋಂದಣಿ ದಿನಾಂಕ : 20-07-2023 ರಿಂದ ಆರಂಭಿಸಲಾಗುವುದು. ಈಗಾಗಲೇ ತಿಳಿಸಿರುವಂತೆ ಪಡಿತರಚೀಟಿಯಲ್ಲಿ ” ಯಜಮಾನಿ ಮಹಿಳೆ ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ . ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ.
ಫಲಾನುಭವಿಯ ನೋಂದಣಿಯನ್ನು ಎರಡು ವಿಧಾನದಿಂದ ಮಾಡಿಸಬಹುದಾಗಿದೆ . ಮೊದಲನೆಯದಾಗಿ ಈಗಾಗಲೇ ರೇಷನ್ಮಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ , ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು.
ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ – ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ . ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ – ಒನ್ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತದೆ .
ಎರಡನೇಯದಾಗಿ ಪರ್ಯಾಯವಾಗಿ ” ಪ್ರಜಾಪ್ರತಿನಿಧಿ ” ( ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು ) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು . ಪ್ರತಿಫಲಾನುಭವಿಯ ನೋಂದಣಿಗೆ ನಿಗದಿಮಾಡಿರುವ ದಿನಾಂಕ , ಸಮಯ ಮತ್ತು ಸ್ಥಳವನ್ನು 1902 ಗೆ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಕಾಲ್ ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್ / ಬಾಪೂಜಿಕೇಂದ್ರ ಕರ್ನಾಟಕ – ಒನ್ / ಬೆಂಗಳೂರು – ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ , ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿ ಕೊಳ್ಳಬಹುದಾಗಿದೆ.
ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರಚೀಟಿ ಸಂಖ್ಯೆ , ಆಧಾರ್ ಕಾರ್ಡ್ ಸಂಖ್ಯೆ , ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ( ಆಧಾರ್ ನಂಬರ್ ರ್ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತು ಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್ ) ಮಾಹಿತಿ ಅಗತ್ಯವಿರುತ್ತದೆ . ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ಈ ಎಲ್ಲಾ ಮಾಹಿತಿಯೊಂದಿಗೆ ಕೇಂದ್ರಕ್ಕೆ ಹಾಜರಾಗುವುದು. ಗ್ರಾಮ್ – ಒನ್ / ಬಾಪೂಜಿಕೇಂದ್ರ / ಕರ್ನಾಟಕ – ಒನ್ | ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು.
ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು . ಮೇಲಿನಂತೆ ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್ – ಒನ್ / ಬಾಪೂಜಿ ಕೇಂದ್ರ ಕರ್ನಾಟಕ – ಒನ್ , ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿ ಕೊಂಡಲ್ಲಿ , ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ SMS ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು.
ಒಂದು ವೇಳೆ ಫಲಾನುಭವಿಯು ಗ್ರಾಮ್ – ಒನ್ / ಬಾಪೂಜಿ ಕೇಂದ್ರ / ಕರ್ನಾಟಕ – ಒನ್ / ಬೆಂಗಳೂರು – ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ , ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪ್ರಯತ್ನಿಸಿದರೆ . ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ . ಈಗಾಗಲೇ ಆಧಾರ್ ರ್ಜೋಡಣೆಯಾಗಿರು ವಫಲಾನುಭವಿಯ ಖಾತೆಗೆ ಮಾಹೆಯಾನ ರೂ .2000 / ಗಳನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು.
ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ . ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ .2000 / -ಗಳನ್ನು ಆರ್.ಟಿ.ಜಿ.ಎಸ್ . ಮೂಲಕ ಜಮೆ ಮಾಡಲಾಗುವುದು . ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ .
ಈಯೋಜನೆಯಡಿ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ . ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ . ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ/ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ/ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.