(www.vknews.in) ಇತಿಹಾಸ ಪ್ರಸಿದ್ಧ ಪವಾಡ ಕೇಂದ್ರವಾದ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಸಂಸ್ಥೆಯ ಅಭಿವೃದ್ಧಿಗಾಗಿ ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿಯವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ನಿವಾಸದಲ್ಲಿ ಭೇಟಿ ಮಾಡಿ ಸಂಸ್ಥೆಯ ಅಭಿವೃದ್ಧಿಗೆ ಅನುದಾನ ಕೋರಿ ಮನವಿ ಸಲ್ಲಿಸಿದರು.
ಮಹಿಳಾ ಕಾಲೇಜು, ಗ್ರಂಥಾಲಯ ನಿರ್ಮಾಣ, ವಿದ್ಯಾರ್ಥಿಗಳಿಗೆ ವಸತಿ ನಿಲಯ, ಹಾಸ್ಟೆಲ್ ಕಟ್ಟಡ ನಿರ್ಮಾಣ, ಸುಸಜ್ಜಿತ ಗಂಜಿ ಕೇಂದ್ರ ನಿರ್ಮಾಣ, ಕಬರುಸ್ತಾನ ತಡೆಗೋಡೆ ಕಾಮಗಾರಿಕೆ, ಉತ್ತರ ಕರ್ನಾಟಕದಿಂದ ಉಳ್ಳಾಲಕ್ಕೆ ಬಸ್ಸ್ ವ್ಯವಸ್ಥೆ, ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುದಾನ ಕೋರಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ , ಕೋಶಾಧಿಕಾರಿ ನಾಝಿಮ್ ರಹ್ಮಾನ್, ಜತೆ ಕಾರ್ಯದರ್ಶಿ ಇಸಾಕ್ ಮೇಲಂಗಡಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.