ಕಲಬುರಗಿ (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯ ಸರಕಾರದ ‘ಐದು ಗ್ಯಾರಂಟಿ’ಗಳ ಪೈಕಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಇದೇವೇಳೆ ಹತ್ತು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ದರದ ವಿದ್ಯುತ್ ಬಿಲ್ ವಿತರಿಸಲಾಯಿತು.
ಗೃಹ ಜ್ಯೋತಿ’ ಯೋಜನೆಯಡಿ ನೋಂದಾಯಿತ 1.41 ಕೋಟಿ ಮನೆಗಳಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶೂನ್ಯ ದರದ ವಿದ್ಯುತ್ ಬಿಲ್ ನೀಡಲಾಗುತ್ತಿದೆ. ಜುಲೈ 25ರ ವೇಳೆಗೆ ಜೆಸ್ಕಾಂನಲ್ಲಿ 20.21 ಲಕ್ಷ, ಬೆಸ್ಕಾಂನಲ್ಲಿ 54.99 ಲಕ್ಷ, ಚೆಸ್ಕಾಂನಲ್ಲಿ 20.49 ಲಕ್ಷ, ಹೆಸ್ಕಾಂನಲ್ಲಿ 30.66 ಲಕ್ಷ, ಮೆಸ್ಕಾಂನಲ್ಲಿ 14.53 ಲಕ್ಷ ಮತ್ತು ಎಚ್ಆರ್ಇಸಿಎಸ್ನಲ್ಲಿ 76,562 ಮನೆಗಳು ಯೋಜನೆಯಡಿ ನೋಂದಣಿಯಾಗಿವೆ. ಆಗಸ್ಟ್ ತಿಂಗಳಲ್ಲಿ ನೋಂದಾಯಿಸಿದವರಿಗೂ ಮುಂದಿನ ತಿಂಗಳಿಂದ ಗೃಹ ಜ್ಯೋತಿಯ ಸೌಲಭ್ಯ ಲಭಿಸಲಿದೆ ಎಂದು ಅವರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.