ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ರಾಜ್ಯದ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ( ಕೆ.ಯು.ಡಬ್ಲ್ಯೂ.ಎಸ್.ಡಿ ಮತ್ತು ಕೆ.ಯು.ಐ.ಡಿ.ಎಫ್.ಸಿ ಸೇರಿದಂತೆ ) ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ಕೋಲಾರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಫಲಾನುಭವಿಗಳಿಗೆ ಸಾಂಕೇತಿವಾಗಿ ಶೂನ್ಯ ದರದ ವಿದ್ಯುತ್ ಬಿಲ್ ನೀಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು ಚುನಾವಣೆ ಪ್ರನಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಜಾರಿ ಮಾಡುವುದಾಗಿ ಸಹಿ ಮಾಡಿದ ಗ್ಯಾರಂಟಿ ಕಾರ್ಡ್ಗಳನ್ನು ಹಂಚಿದ್ದೆವು. ಅದರಂತೆ ಒಂದೊಂದಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ . ಸರ್ಕಾರವು ನುಡಿದಂತೆ ನಡೆದಿದೆ . ಇಷ್ಟೊಂದು ದೊಡ್ಡ ಮೊತ್ತವನ್ನು ಸರ್ಕಾರ ಹೇಗೆ ಹೊಂದಾಣಿಕೆ ಮಾಡಲಿದೆ ಎಂಬ ಆತಂಕವಿತ್ತು . ಆದರೆ ಮುಖ್ಯಮಂತ್ರಿಗಳು ಇದನ್ನು ಸುಗಮವಾಗಿ ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಬಡವರ ಪರ ಎಂಬುದನ್ನು ಸಾಬೀತು ಪಡಿಸಿದೆ .
ಮೊದಲನೇ ಸಂಪುಟದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ತೀರ್ಮಾನ ಮಾಡಲಾಗಿದ್ದು , ಅದರಂತೆ ಮೊದಲಿಗೆ ಮಹಿಳೆಯರು ಮತ್ತು ಹೆಣ್ಣು ಮಕ್ಕಳು ರಾಜ್ಯಾದ್ಯಂತ ಉಚಿತ ಬಸ್ ಪ್ರಯಾನ ಮಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಯಿತು .
ಈ ಯೋಜನೆಯಡಿಮಹಿಳೆಯರು ಪ್ರೇಕ್ಷಣೀಯ , ಧಾರ್ಮಿಕ ಕ್ಷೇತ್ರಗಳು ಹಾಗೂ ನೆಂಟರಿಸ್ಟರ ಮನೆಗೆ ಸಂತೋಷದಿಂದ ತೆರಳುತ್ತಿದ್ದಾರೆ. ಈ ಮೂಲಕ ಸರ್ಕಾರದ ಯೋಜನೆಯು ಸಾರ್ಥಕವಾಗಿದೆ ಎಂದರು .
ಹಸಿವು ಮುಕ್ತ ಕರ್ನಾಟಕ್ಕಾಗಿ ಅನ್ನ ಭಾಗ್ಯ ಯೋಜನೆಯ ಜಾರಿ ಮಾಡಲಾಗಿದೆ . ಈ ಯೋಜನೆಯಡಿ ಅಂತ್ಯೋದಯ ಹಾಗೂ ಬಿ.ಪಿ.ಎಲ್ . ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಉಳಿದ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಸಂವಿಧಾನ , ಪ್ರಜಾಪ್ರಭುತ್ವದ ಬಲವರ್ಧನೆಯ ಮುಖಾಂತರ ಜನರ ನೆಮ್ಮದಿಯುತ ಜೀವನಕ್ಕೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ದೇಶದಲ್ಲೇ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರವು ಮಾದರಿ ಆಡಳಿತವನ್ನು ನೀಡುತ್ತಿದೆ ಎಂದು ತಿಳಿಸಿದರು .
ಈ ಯೋಜನೆಗಳು ಪ್ರತಿಯೊಂದು ಕುಟುಂಬವು ಆರ್ಥಿಕ ಸ್ವಾವಲಂಬನೆಯ ಬದುಕಿಗೆ ಸದೃಢವಾದ ಹೆಜ್ಜೆ ಇಡಲು ಸಹಕಾರಿಯಾಗಲಿದೆ . ದೇಶದಲ್ಲೇ ಐತಿಹಾಸಕವಾದ ಈ ಯೋಜನೆಯಡಿ ನೋಂದಾಯಿತ 1.41 ಕೋಟಿ ಮನೆಗಳಿಗೆ ಜುಲೈ ತಿಂಗಳ ವಿದ್ಯುತ್ ಬಳಕೆಯ ಶೂನ್ಯ ದರದ ವಿದ್ಯುತ್ ಬಿಲ್ ದೊರೆಯಲಿದೆ .
ಜಿಲ್ಲೆಯಲ್ಲಿ 2.70 ಲಕ್ಷ ಕುಟುಂಬಗಳು ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು , ಉಳಿದ ಎಲ್ಲಾ ಕುಟುಂಬಗಳು ಗೃಹಜ್ಯೋತಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್ , ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ | ಜಿ . ಮಂಜುನಾಥ್ , ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ಕೆ.ಎಂ. , ಮಾಲೂರು ಶಾಸಕರಾದ ಕೆ.ವೈ. ನಂಜೇಗೌಡ , ಶ್ರೀನಿವಾಸಪುರ ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ , ಕೆ.ಜಿ.ಎಫ್ ಶಾಸಕರಾದ ರೂಪಕಲಾ ಎಂ.ಶಶಿಧರ್ , ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್ . ಅನಿಲ್ ಕುಮಾರ್ , ಇಂಚರ ಗೋವಿಂದರಾಜು , ಜಿಲ್ಲಾಧಿಕಾರಿ ಅಕ್ರಂ ಪಾಷ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ , ಕೆ.ಜಿ.ಎಫ್ . ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತಕುಮಾರ್ , ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ. ರಮೇಶ್ , ಕೋಲಾರ ವೃತ್ತದ ಅಧೀಕ್ಷಕ ಇಂಜಿನಿಯರ್ ಎ.ಆರ್ . ಮೃತ್ಯುಂಜಯ , ಕಾರ್ಯನಿರ್ವಾಹಕ ಇಂಜಿನಿಯರ್ ನಟರಾಜ್ , ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.