ಮೂಡುಬಿದಿರೆ (www.vknews.in) : ಸ್ಥಳೀಯ ಕಾಲೇಜು ವಿದ್ಯಾರ್ಥಿನಿ ಜೊತೆ ಮಾತನಾಡಿದ ಮುಸ್ಲಿಂ ವಿದ್ಯಾರ್ಥಿಗೆ ಸಂಘ ಪರಿವಾರದ ತಂಡವೊಂದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂಡುಬಿದಿರೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ಕಾಲೇಜು ವಿದ್ಯಾರ್ಥಿನಿಯೋರ್ವಳು ಸೋಮವಾರ ರಾತ್ರಿ ಬೆಂಗಳೂರಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಆಕೆಯ ಗೆಳೆಯ ಕೋಟೆಬಾಗಿಲಿನ ಮುಸ್ಲಿಮ್ ವಿದ್ಯಾರ್ಥಿ ಬಸ್ ಬರುವ ತನಕ ವಿದ್ಯಾರ್ಥಿನಿ ಜತೆ ಇದ್ದು ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯ ಸಂಘ ಪರಿವಾರದ ತಂಡವೊಂದು ವಿದ್ಯಾರ್ಥಿನಿ ಬಸ್ ಹತ್ತಿದ ಬಳಿಕ ಮುಸ್ಲಿಂ ವಿದ್ಯಾರ್ಥಿಗೆ ಹಲ್ಲೆ ನಡೆಸಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.