ಪುತ್ತೂರು (www.vknews.in) : ನಗರದ ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಚಾಕುವಿನಿಂದ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದಾರೆ. ವಿಟ್ಲ ಅಳಿಕೆ ನಿವಾಸಿ ಗೌರಿ(18) ಮೃತಪಟ್ಟ ಯುವತಿ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಪದ್ಮರಾಜ್ ಚಾಕುವಿನಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಬಳಿಕ ಬೈಕನ್ನು ಘಟನಾ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ.
ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಯಿತಾದರೂ, ಯುವತಿಯ ಜೀವ ಉಳಿಸಲು ಸಾಧ್ಯವಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.