ಜೈಪುರ (www.vknews.in) ; ರಾಜಸ್ಥಾನದ ಕೊಟ್ಪುಟ್ಲಿಯ ಸರ್ಕಾರಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಹಾಸ್ಟೆಲ್ನಲ್ಲಿ ಓದುತ್ತಿದ್ದ 15 ವರ್ಷದ ಬಾಲಕ ತರಗತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಜಾತಿ ನಿಂದನೆಯಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇಬ್ಬರು ಶಿಕ್ಷಕರು ನಿರಂತರವಾಗಿ ನಿಂದಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಾಂಶುಪಾಲರಾಗಲಿ, ಉಪ ಪ್ರಾಂಶುಪಾಲರಾಗಲಿ ಸಿದ್ಧರಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ ತನ್ನ ತಂದೆಗೆ ಹೇಳಿದ್ದ ಎಂದು ವರದಿಯಾಗಿದೆ.
ಬಾಲಕನ ಸಾವಿನ ನಂತರ ಶಾಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ನಡೆದಿದ್ದವು. ನಂತರ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕೊಲೆ ಪ್ರಕರಣ ದಾಖಲಿಸಿದಾಗ ಬಾಲಕನ ಸಂಬಂಧಿಕರು ಮತ್ತು ನೆರೆಹೊರೆಯವರು ಪ್ರತಿಭಟನೆಯನ್ನು ಹಿಂಪಡೆದರು. ವರದಿ ಪ್ರಕಾರ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.