ಸುರತ್ಕಲ್ (www.vknews.in) : ಸುರತ್ಕಲ್ ಠಾಣಾ ವ್ಯಾಪ್ತಿಯ ಕರಂಬಾರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕರಂಬಾರು ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್ (23) ಮಾರಣಾಂತಿಕ ಹಲ್ಲೆಗೊಳಗಾದ ಯುವಕನಾಗಿದ್ದಾನೆ.
ಅಬ್ದುಲ್ ಸಫ್ವಾನ್ ತನ್ನ ಸ್ನೇಹಿತ ಮುಹಮ್ಮದ್ ಸಫ್ವಾನ್ನೊಂದಿಗೆ ರವಿವಾರ ರಾತ್ರಿ ಕರಂಬಾರಿನಿಂದ ಬಜ್ಜೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಗುಂಪೊಂದು ಅವರ ಮೇಲೆ ದಾಳಿ ಮಾಡಿದ್ದು, ಅಬ್ದುಲ್ ಸಫ್ವಾನ್ ಅವರ ಕೈ ಮತ್ತು ಕುತ್ತಿಗೆಗೆ ಚುಚ್ಚಿದ ಗಾಯಗಳಾಗಿವೆ. ಅವರನ್ನು ತಕ್ಷಣ ಬಜ್ಜೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.