(www.vknews.in) ಸೆಪ್ಟಂಬರ್ 4, 2023 ರಂದು ಜಿಲ್ಲಾ ಪಂಚಾಯತಿ ಆವರಣದ ಸಹ್ಯಾದ್ರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಅವರು ಆಯೋಜಿಸಿದ್ದ ಸಭೆಯಲ್ಲಿ ಸಂಪೂರ್ಣ ಸ್ವರಾಜ್ ಫ಼ೌಂಡೇಷನ್ – ಬೆಂಗಳೂರು, ವತಿಯಿಂದ ಗ್ರಾಮ ಪಂಚಾಯತಿ ಸದಸ್ಯರಿಗೆ “ನ್ಯಾವಿಗೇಟೆಡ್ ಲರ್ನಿಂಗ್ ಟೆಕ್ನಾಲಜಿ ಅಥವಾ ದಿಕ್ಸೂಚಿ ಕಲಿಕಾ ತಂತ್ರಜ್ಞಾನ”ದ ಮೂಲಕ ನಿರಂತರ ಸಾಮರ್ಥ್ಯಾಭಿವೃದ್ಧಿ ಕಲಿಕಾ ವಿಧಾನದ ಕುರಿತಂತೆ ಡಾ. ಶಂಕರ ಕೆ. ಪ್ರಸಾದ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ಟ್ರಸ್ಟಿ ಅವರು ಪ್ರೊಫ಼ೆಸರ್ ಸದಾನಂದ ಜಾನೆಕೆರೆ, ಮಾಜಿ ಅಧ್ಯಕ್ಷರು, ಶ್ರೀ ಅಬ್ದುಲ್ ನಜೀರ್ ಸಾಬ್ ಪೀಠ, ಪಂಚಾಯತ್ ರಾಜ್ ಅವರೊಟ್ಟಿಗೆ, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಉಪ ಕಾರ್ಯದರ್ಶಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪ್ರಸ್ತುತಪಡಿಸಿದರು.
ಕೇಂದ್ರ ಸರಕಾರದಡಿಯಲ್ಲಿ ರಚಿಸಲಾಗಿರುವ “ರಾಷ್ಟ್ರೀಯ ಸಾಮರ್ಥ್ಯ ನಿರ್ಮಾಣ ಚೌಕಟ್ಟು – 2022” ಶಿಫ಼ಾರಸ್ಸು ಮಾಡಲಾಗಿರುವ ನಿರಂತರ ಕಲಿಕಾ ವಿಧಾನವಾದ “ನ್ಯಾವಿಗೇಟೆಡ್ ಲರ್ನಿಂಗ್ ಟೆಕ್ನಾಲಜಿ”ಯನ್ನು ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ 35 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿ ಪ್ರಾಯೋಗಿಕವಾಗಿ ಮುನ್ನಡೆಸಲು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು – ಜಿಲ್ಲಾ ಪಂಚಾಯತಿ, ಹಾಗೂ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಅವರುಗಳು ನಿರ್ಣಯ ತೆಗೆದುಕೊಂಡಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.