(www.vknews.in) ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರವರಿಂದ ಸಚಿವ ಜಮೀರ್ ಅಹಮದ್ ಖಾನ್ ಭೇಟಿ: ಅಭಿನಂದನೆ ಹಾಗೂ ಮನವಿ ಸಲ್ಲಿಕೆ.
ಪುತ್ತೂರು: ಕೆಪಿಸಿಸಿ ಸಂಯೋಜಕ ನ್ಯಾಯವಾದಿ ನೂರುದ್ದೀನ್ ಸಾಲ್ಮರವರು, ಇಂದು ಮಿತ್ತೂರಿನ ದಾರುಲ್ ಇರ್ಶಾದ್ ಶಿಕ್ಷಣ ಸಂಸ್ಥೆಯಲ್ಲಿ, ಕರ್ನಾಟಕ ರಾಜ್ಯದ ವಸತಿ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಸನ್ಮಾನ್ಯ ಜೆಡ್ ಜಮೀರ್ ಅಹಮದ್ ಖಾನ್ ರವರನ್ನು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ, ಅವರು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಒಂದರಿಂದ ಹತ್ತನೇ ತರಗತಿ (ಮೆಟ್ರಿಕ್ ಪೂರ್ವ) ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರಕಾರವು ರದ್ದುಗೊಳಿಸಿದ್ದು, ಆ ವಿದ್ಯಾರ್ಥಿ ವೇತನವನ್ನು ಕರ್ನಾಟಕದಲ್ಲಿ, ರಾಜ್ಯ ಸರ್ಕಾರವು, ಮರು ಸ್ಥಾಪಿಸಿದ್ದಕ್ಕಾಗಿ ಸಚಿವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮಾತ್ರವಲ್ಲ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಆದಾಯ ಮಿತಿಯನ್ನು ಸಮಾನವಾಗಿ ಅಂದರೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಇರುವಂತೆ, ನಿಗದಿಪಡಿಸಲು ಸಚಿವರಿಗೆ ಮನವಿ ಸಲ್ಲಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.