ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳಲ್ಲಿ 4 ಗ್ಯಾರಂಟಿಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಸ್ಥಳೀಯ ಚುನಾವಣೆಗಳನ್ನು ಎದುರಿಸಲು ಸಜ್ಜಾಗಬೇಕೆಂದು ಎಬಿಡಿ ಟ್ರಸ್ಟ್ ಮುಖ್ಯಸ್ಥ, ಭಾರತ ಜೋಡೋ ಅಭಿಯಾನದ ಕೆಪಿಸಿಸಿ ಸಂಯೋಜಕ ರಾಜೀವ್ಗೌಡ ಕರೆ ನೀಡಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಗಣಪನ ಹಬ್ಬದಂದು ಯುವಕರು ಗಣಪನ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಹಣಕಾಸಿನ ನೆರವು ನೀಡಿ ಮಾತನಾಡಿದ ಅವರು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಈಗಾಗಲೆ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಇನ್ನುಳಿದ ಯುವ ಶಕ್ತಿ ಗ್ಯಾರಂಟಿಯನ್ನು ಡಿಸೆಂಬರ್ ಒಳಗೆ ಅನುಷ್ಠಾನಗೊಳಿಸಲಾಗುತ್ತದೆ ಎಂದರು.
ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರವು ಕೊಟ್ಟ ಮಾತಿಗೆ ಬದ್ಧವಾಗಿದ್ದು ಜನ ಸಾಮಾನ್ಯರ ವಿಶ್ವಾಸವನ್ನು ಉಳಿಸಿಕೊಂಡಿದೆ. ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಆರ್ಥಿಕ ಮಟ್ಟ ಸುಧಾರಣೆಯನ್ನು ಕೈಗೊಂಡಿದೆ ಎಂದರಲ್ಲದೆ ಈ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಟ್ಟು ಮುಂಬರುವ ಲೋಕಸಭಾ ಚುನಾವಣೆ ಸೇರಿ ಎಲ್ಲ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಬೇಕಿದೆ. ಮತ್ತೊಮ್ಮೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಕಾರಕ್ಕೆ ಬರುವಂತೆ ನಾವೆಲ್ಲರೂ ಸಂಘಟನಾತ್ಮಕವಾಗಿ ಮಾಡಬೇಕಿದೆ ಎಂದು ಕೋರಿದರು.
ಕಳೆದ 3 ವರ್ಷಗಳಿಂದಲೂ ಗಣಪತಿ ಹಬ್ಬವನ್ನು ಕ್ಷೇತ್ರದಲ್ಲಿ ಆಚರಿಸಲು ನನ್ನ ಕೈಲಾದ ನೆರವನ್ನು ನೀಡುತ್ತಾ ಬಂದಿದ್ದು ವರ್ಷವೂ ಕ್ಷೇತ್ರದಲ್ಲಿನ ಎಲ್ಲ ಹಳ್ಳಿಗಳಲ್ಲೂ ಯುವಕರು ಗಣಪನನ್ನು ಪ್ರತಿಷ್ಠಾಪಿಸಿ ಪೂಜಿಸಲು ಹಣಕಾಸಿನ ನೆರವು ನೀಡುತ್ತಿದ್ದೇನೆ ಎಂದು ವಿವರಿಸಿದರು.
ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ಗೌಡ ಮಾತನಾಡಿ, ಕಳೆದ ಚುನಾವಣೆಯಲ್ಲಿ ಸೋತ ನಂತರ ರಾಜೀವ್ಗೌಡರು ಕ್ಷೇತ್ರವನ್ನು ಬಿಡುತ್ತಾರೆ ಕಾಣಿಸಿಕೊಳ್ಳೊಲ್ಲ ಎಂದು ಬಹುತೇಕ ಮಂದಿ ಕುಹಕವಾಡಿದರು. ಮಾನಸಿಕವಾಗಿ ಕುಗ್ಗುವಂತೆ ಮಾಡಿದರು ಆದರೆ ರಾಜೀವ್ಗೌಡರು ಈ ಕ್ಷೇತ್ರವನ್ನು ಎಂದಿಗೂ ಬಿಡುವುದಿಲ್ಲ. ಸೋಲಾಗಲಿ ಗೆಲುವಾಗಲಿ ಈ ಕ್ಷೇತ್ರದ ಜನರೊಂದಿಗೆ ಕಷ್ಟ ಸುಖದಲ್ಲಿ ಬೆರೆತು ಸಾಗುತ್ತಾರೆ ಕ್ಷೇತ್ರದಲ್ಲಿ ಆಂಬ್ಯುಲೆನ್ಸ್ ಸೇವೆ ಮುಂದುವರೆದಿದ್ದು ಸುಮಾರು 25 ಸಾವಿರ ಮಂದಿಗೆ ಆಂಬ್ಯುಲೆನ್ಸ್ ಸೇವೆ ದೊರೆತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕ್ಷೇತ್ರದ ಎಲ್ಲ ಗ್ರಾಮಗಳಿಗೂ ತಲಾ 5 ಸಾವಿರ ರೂ.ಹಣಕಾಸಿನ ನೆರವು ನೀಡಿದರು.
ಚಿಲಕಲನೇರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರೆಡ್ಡಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಶಿಡ್ಲಘಟ್ಟ ಎಸ್.ಎಫ್.ಸಿ.ಎಸ್ ಬ್ಯಾಂಕಿನ ಅಧ್ಯಕ್ಷ ಶೆಟ್ಟಹಳ್ಳಿ ರಾಮಚಂದ್ರ, ದೊಡ್ಡತೇಕಹಳ್ಳಿ ಗೋಪಾಲ್ರೆಡ್ಡಿ, ಹನುಮಂತಪುರ ವೆಂಕಟೇಶ್, ಟಿ.ಕೆ.ನಟರಾಜ್, ಸಾದಲಿ ಗೋವಿಂದರಾಜು, ಹಾಪ್ಕಾಮ್ಸ್ ಮಾಜಿ ಅಧ್ಯಕ್ಷ ಬಿ.ವಿ.ಮುನೇಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರಾಯಪ್ಪನಹಳ್ಳಿ ಅಶ್ವತ್ಥನಾರಾಯಣರೆಡ್ಡಿ, ಹಿರೆಬಲ್ಲ ಕೃಷ್ಣಪ್ಪ, ರವಿಕುಮಾರ್, ಹಂಡಿಗನಾಳ ಜಯರಾಂ, ಮಧುಸುಧನ್, ಪಂಪ್ ನಾಗರಾಜ್,ಬಾಂಬೆ ನವಾಝ್, ಮಹಬೂಬ್ ಪಾಷ, ಸೈಯದ್ ಬಾಬಾ, ಮಳಮಾಚನಹಳ್ಳಿ ರಾಮಾಂಜಿ, ಮಳ್ಳೂರು ನಾಗರಾಜ್, ಯುವ ಕಾಂಗ್ರೆಸ್ ಅಧ್ಯಕ್ಷ ನರೇಂದ್ರ, ಜಿಲ್ಲಾ ಯುವ ಕಾಂಗ್ರೆದ್ ಉಪಾಧ್ಯಕ್ಷ ದೇವರಮಳ್ಳೂರು ರವಿ ಮತ್ತಿತರರು ಉಪಸ್ಥಿತರಿದ್ದರು.
ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಸುತ್ತಮುತ್ತಲಿನ ಪ್ರದೇಶದಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆ ಮಾಡಲು ಬಿಡುವುದಿಲ್ಲವೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಭರವಸೆ ನೀಡಿದ್ದಾರೆ ಮತ್ತೊಂದಡೆ ಆ ಭಾಗದ ರೈತರ ಸಭೆಯನ್ನು ನಡೆಸಿ ಸ್ಥಳೀಯ ಶಾಸಕರು ರಾಜಕಾರಣ ಮಾಡಲು ಹೊರಟಿದ್ದಾರೆ, ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದರೆ 1 ಸಾವಿರ ಕೋಟಿ ಅನುದಾನ ತರಬಹುದಾಗಿತ್ತು ಆದರೂ ಸಹ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಜನರಿಗೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ
ಕಾಂಗ್ರೆಸ್ ಮುಖಂಡ ರಾಜೀವ್ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.