ನವದೆಹಲಿ (www.vknews.in) | ರಾಷ್ಟ್ರ ರಾಜಧಾನಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ಆಟೋರಿಕ್ಷಾ ಚಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜನತಾ ಮಜೂರ್ ಕಾಲೋನಿ ನಿವಾಸಿಯಾದ ಬಾಲಕಿಯ ಮೇಲೆ ಇಬ್ಬರು ಸಹೋದರರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಗುರುವಾರ ಈ ಘಟನೆ ನಡೆದಿದೆ.
ಜಾಹಿದ್ (22) ಮತ್ತು ಆತನ ಸಹೋದರ ಜುಬೈರ್ (24) ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರೂ ಆಟೋ ಚಾಲಕರು. ಇಬ್ಬರ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಗುವನ್ನು ಕೌನ್ಸೆಲಿಂಗ್ ಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಾರ್ಜ್ ಟಿರ್ಕಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.