ಸುಳ್ಯ (www.vknews.in) : ಇತ್ತೀಚಿಗೆ ಪ್ರಕಟಗೊಂಡ ಕೇರಳ ಓಣಂ ಬಂಪರ್ ಲಾಟರಿ ಫಲಿತಾಂಶದಲ್ಲಿ 25 ಕೋಟಿ ರೂ. ಬಹುಮಾನದ ಮೊತ್ತವನ್ನು ಬೆಳ್ಳಾರೆ ಸಮೀಪದ ಕಲ್ಮಡ್ಕದ ಯುವಕನೊಬ್ಬ ಗೆದ್ದಿದ್ದಾನೆ ಎನ್ನುವ ನಕಲಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ರೀತಿ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುವಕ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕಲ್ಮಡ್ಕ ಗ್ರಾಮದ ನಿವಾಸಿ ಗೌತಮ್ ಕುಲ್ಸಿ ಮನೆ (27) ಚಾಲಕರಾಗಿ ದುಡಿಯುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಅವರಿಗೆ ಕೇರಳ ಓಣಂ ಬಂಪರ್ ಲಾಟರಿ 25 ಕೋಟಿ ರೂ. ಜಯಿಸಿದ್ದಾರೆಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇದರಿಂದ ಯುವಕ ಹಾಗೂ ಅವರ ಮನೆಯವರಿಗೆ ತೀವ್ರ ಮಾನಸಿಕ ಕಿರಿಕಿರಿಯಾಗಿದೆ. ಪ್ರತಿಯೊಬ್ಬರು ಕರೆ ಮಾಡಿ ವಿಚಾರಿಸುವುದಕ್ಕೆ ಉತ್ತರ ಕೊಡುವುದಕ್ಕೂ ಕಷ್ಟವಾಗಿದೆ. ಇದರಿಂದ ನೊಂದ ಗೌತಮ್ ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನಲ್ಲಿ ತಮ್ಮ ವಿರುದ್ಧ ಅಪಪ್ರಚಾರ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.