ಪುತ್ತೂರು (www.vknews.in) : ಕೆಯ್ಯೂರಿನಲ್ಲಿ ರಸ್ತೆ ದಾಟುತ್ತಿದ್ದ ಯುಕೆಜಿ ವಿದ್ಯಾರ್ಥಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಪಾತುಂಜ ನಿವಾಸಿ, ಮೂಡಬಿದ್ರೆ ರೇಂಜ್ ಜಂಇಯ್ಯತ್ತುಲ್ ಮುಅಲ್ಲಿಮೀನ್ ಮಾಜಿ ಅಧ್ಯಕ್ಷರಾದ ಹಾರೀಸ್ ದಾರಿಮಿರವರ ಪುತ್ರ ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಯುಕೆಜಿ ವಿದ್ಯಾರ್ಥಿ ಮೊಹಮ್ಮದ್ ಆದಿಲ್ (5) ಮೃತಪಟ್ಟ ವಿದ್ಯಾರ್ಥಿ..
ಸೆ. 23ರಂದು ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಶಾಲಾ ಬಳಿ ರಸ್ತೆ ದಾಟುವ ವೇಳೆ ಬೆಳ್ಳಾರೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ತಲುಪಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.