ಶಿಡ್ಲಘಟ್ಟ, (ವಿಶ್ವ ಕನ್ನಡಿಗ ನ್ಯೂಸ್) : ಕೋಲಾರ ಜಿಲ್ಲಾ ಕೇಂದ್ರದಲ್ಲಿ ನಡೆದ ಜನತಾ ದರ್ಶನದಲ್ಲಿ ರೈತರ ಪರವಾಗಿ ಧ್ವನಿ ಎತ್ತಲು ಹೋಗಿದ್ದ ಸಂಸದ ಎಸ್.ಮುನಿಸ್ವಾಮಿ ಅವರನ್ನು ಅವಮಾನಿಸಿದ ಎಸ್ಪಿ ನಾರಾಯಣ ಅಮಾನತ್ತಿಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸೇವಾ ಸೌಧ ಕಚೇರಿಯಿಂದ ಬೈಕ್ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ವಿರುಧ್ಧ ಘೋಷಣೆಗಳನ್ನು ಕೂಗಿದ್ದರಲ್ಲದೆ ಸಾರ್ವಜನಿಕ ಸಭೆಯಲ್ಲಿ ರೈತರ ಪರವಾಗಿ ಧ್ವನಿ ಎತ್ತಲು ಹೋಗಿದ್ದ ಸಂಸದ ಎಸ್.ಮುನಿಸ್ವಾಮಿ ಅವರನ್ನು ಅವಮಾನ ಮಾಡಿದ ಜಿಲ್ಲಾ ಎಸ್ಪಿ ನಾರಾಯಣ ಅವರನ್ನು ಕೂಡಲೇ ಸೇವೆಯಿಂದ ಅಮಾನತ್ತುಗೊಳಿಸಬೇಕು ಒತ್ತಾಯಿಸಿದರು.
ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರಿಂದ ಆಶೀರ್ವಾದದಿಂದ ಆಯ್ಕೆಯಾಗಿರುವ ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ಸಮ್ಮುಖದಲ್ಲಿ ಅವಮಾನ ಮಾಡಿದ್ದಾರೆ ಅದಕ್ಕೆ ನಾವು ತೀವ್ರವಾಗಿ ಖಂಡಿಸುತ್ತೇವೆ ಜೊತೆಗೆ ರೈತರ ಪರವಾಗಿ ಹೋಗಿದ್ದ ಸಂಸದರನ್ನು ಸಭೆಯಿಂದ ಹೊರಕಳುಹಿಸಿ ಅವಮಾನ ಮಾಡಿರುವ ಜಿಲ್ಲಾ ಎಸ್ಪಿ ನಾರಾಯಣ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ 8 ಕ್ಷೇತ್ರಗಳ ಪ್ರತಿನಿಧಿ ಸಂಸದ ಎಸ್.ಮುನಿಸ್ವಾಮಿ ಅವರನ್ನು ಕೋಲಾರ ಜಿಲ್ಲಾ ಕೇಂದ್ರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅಗೌರವಾಗಿ ನಡೆದುಕೊಂಡ ಜಿಲ್ಲಾ ಎಸ್ಪಿ ನಾರಾಯಣ ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ಸೀಕಲ್ ಆನಂದ್ಗೌಡ, ಕನಕಪ್ರಸಾದ್, ಮುಖಂಡರಾದ ಸಂಜೀವಪ್ಪ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಶ್ರೀರಾಮ, ನಾರ್ಥ್ ಈಸ್ಟ್ ಸುರೇಶ್, ರಮೇಶ್ ಬಾಯಿರಿ, ನಾರಾಯಣಸ್ವಾಮಿ, ಜಾತವಾರ ಭರತ್, ರಜನಿಕಾಂತ್ ಬಾಬು ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೇ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.