ಮಹಾರಾಷ್ಟ್ರ (www.vknews.in) : ನಗರದ ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ನವಜಾತ ಶಿಶುಗಳ ಸಾವಿನ ಸಂಖ್ಯೆ 31 ಕ್ಕೇರಿದೆ. ಸೋಮವಾರ ಒಂದೇ ದಿನ 12 ನವಜಾತ ಶಿಶುಗಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದರು. ಇದೀಗ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ನಾಂದೇಡ್ ಆಸ್ಪತ್ರೆಯಲ್ಲಿ ರೋಗಿಗಳ ಸ್ಥಿತಿ ನರಕಸದೃಶವಾಗಿದೆ. ಕಡೆ ಪಕ್ಷ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಘಟನೆಯ ಬಗ್ಗೆ ಮಾಹಿತಿಯನ್ನೂ ಪಡೆದುಕೊಂಡಿಲ್ಲ.ಆಸ್ಪತ್ರೆಯ ಡೀನ್ ಡಾ.ವಾಕೋಡೆ ಅವರು ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇರುವ ಸಿಬ್ಬಂದಿಗಳು ಹಾಗೂ ರೋಗಿಗಳ ಸಂಖ್ಯೆಗೆ ಸಾಕಷ್ಟು ವ್ಯತ್ಯಾಸವಿದೆ. ಇದಕ್ಕೆ ಸರ್ಕಾರ ನೇರ ಹೊಣೆ, ಸರ್ಕಾರ ಕೂಡಲೇ ಈ ಬಗ್ಗೆ ಗಮನ ಹರಿಸಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌವ್ಹಾಣ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.