ಸುಳ್ಯ (www.vknews.in) : ಅಮರಪಡ್ಡೂರು ಗ್ರಾಮದ ಕುಳ್ಳಾಜಿ ಎಂಬಲ್ಲಿ ಕಾಡಿನಲ್ಲಿ ಸಿಗುವ ವಿಷಕಾರಿ ಹಣ್ಣಿನ ಜ್ಯೂಸ್ ತಯಾರಿಸಿ ಕುಡಿದ ಮಹಿಳೆಯೋರ್ವರು ಮೃತಪಟ್ಟಿದ್ದಾರೆ. ಲೀಲಾವತಿ(35) ಮೃತಪಟ್ಟ ಮಹಿಳೆ.
ಲೀಲಾವತಿ ಹಾಗೂ ಅವರ ತಂದೆ ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಮೈರೋಳ್ ಹಣ್ಣನ್ನು, ತಿನ್ನಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ ಮಾಡಿ ಕುಡಿದಿದ್ದರು.
ಇದರ ಬಳಿಕ ತಂದೆ ಮಗಳಿಬ್ಬರೂ ಅಸ್ವಸ್ಥರಾಗಿದ್ದರು. ಅವರಲ್ಲಿ ಲೀಲಾವತಿಯವರಿಗೆ ವಾಂತಿ, ಭೇದಿ ಆರ೦ಭವಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಸೌಖ್ಯ ತೀವ್ರಗೊ೦ಡ ಕರಣ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮ೦ಗಳೂರಿಗೆ ಕೊ೦ಡೊಯ್ಯುವಾಗ ಅವರು ಕೊನೆಯುಸಿರೆಳೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.