ಮಂಗಳೂರು (www.vknews.in) : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತಪಟ್ಟ ಪೊಲೀಸ್ ಸಿಬ್ಬಂದಿ.
ವಯರ್ ಲೆಸ್ ಇನ್ಸ್ಪೆಕ್ಟರ್ ವಾಹನಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತ: ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್ಪೆಕ್ಟರ್ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.
ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ವಿವಾಹಿತರಾಗಿರುವ ಅವರು ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.