ಹೈದರಾಬಾದ್ (www.vknews.in) : ಹೋಮ್ ವರ್ಕ್ ಮಾಡಲಿಲ್ಲ ಎಂದು ಯುಕೆಜಿ ವಿದ್ಯಾರ್ಥಿಯ ತಲೆಗೆ ಶಿಕ್ಷಕರೊಬ್ಬರು ಹೊಡೆದ ಪರಿಣಾಮ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ನಗರದ ಖಾಸಗಿ ಶಾಲೆಯಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ. ಶಿಕ್ಷಕಿ ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ಕುಸಿದು ಬಿದ್ದ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಿಸದೆ ವಿದ್ಯಾರ್ಥಿ ಮೃತಪಟ್ಟಿದ್ದಾರೆ.
ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.