ಮಂಗಳೂರು (www.vknews.in) : ರಾ.ಹೆ.66ರ ನೇತ್ರಾವತಿ ಸೇತುವೆಯಲ್ಲಿ ಇಂದು (ಬುಧವಾರ) ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಸವಾರನನ್ನು ಮೂಲತಃ ಉಳ್ಳಾಲದ ಕೋಟೆಕಾರ್ನಲ್ಲಿ ವಾಸವಿರುವ ಹನೀಫ್ ಎಂಬವರ ಪುತ್ರ ಅಝ್ವೀನ್ (21)ಎಂದು ಗುರುತಿಸಲಾಗಿದೆ.
ದಕ್ಕೆಗೆ ಮೀನುಗಾರಿಕೆಯ ಕೆಲಸಕ್ಕೆಂದು ಅಝ್ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ನೇತ್ರಾವತಿ ಸೇತುವೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಝ್ವೀನ್ ದ್ವಿಚಕ್ರ ವಾಹನ ಆ್ಯಕ್ಸಸ್ನಲ್ಲಿ ತೆರಳುತ್ತಿದ್ದಾಗ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಮೀನಿನ ವಾಹನವೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದ ಎನ್ನಲಾಗಿದೆ. ಹಾಗಾಗಿ ಹಿಂಬಾಗದಲ್ಲಿದ್ದ ಧ್ವೀಚಕ್ರ ವಾಹನ ಡಿಕ್ಕಿಹೊಡೆಯಿತು ಎನ್ನಲಾಗಿದೆ.
ಗಂಭೀರ ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾದರೂ ವೈದ್ಯರು ಸವಾರ ಮೃತಪಟ್ಟಿರುದಾಗಿ ಘೋಷಿಸಿದರು ಎನ್ನಲಾಗಿದೆ.ಪೋಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.